ಟೆಸ್ಟ್ ಕ್ರಿಕೆಟ್ ಗೆ ಕುಂಬ್ಳೆ ವಿದಾಯ ಹೇಳಿದ್ದಾರೆ. ಇಂದು ಅವರು ತಮ್ಮ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಿದರು.
ಅನಿಲ್ ಕುಂಬ್ಳೆ (ಜನನ: ಅಕ್ಟೋಬರ್ ೧೭, ೧೯೭೦)
ಕುಂಬ್ಳೆ ಲೆಗ್ ಸ್ಪಿನ್ನರ್. ಇವರ ಗೂಗ್ಲಿ ಕ್ರಿಕೆಟ್ ಜಗತ್ತಿನಲ್ಲಿ ಬಹಳ ಪ್ರಸಿದ್ಧ.
ಇವರು ಮೊದಲು ಮಧ್ಯ ವೇಗದ ಬೌಲರ್ ಆಗಿ ಕ್ರಿಕೆಟ್ ಪ್ರವೇಶಿಸಿದ್ದು. ಇದು ಅವರಿಗೆ ಕೊಡುಗೆ ಎಂಬಂತೆ ವೇಗವಾಗಿ ಬೌಲ್ ಮಾಡಲು ಸಹಾಯಕವಾಗಿದೆ.
ಸಾಧಾರಣವಾಗಿ ಸ್ಪಿನ್ ಬೌಲರ್‌ಗಳು ಬಾಲ್ ಹಾಕುವ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಬೌಲ್ ಮಾಡುವ ಅನಿಲ್ ಕುಂಬ್ಳೆ, ೬೦೦ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.
ಇವರು ಒಂದು ದಿನದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ಎಪ್ರಿಲ್ ೨೫, ೧೯೯೦ ರಂದು, ಶ್ರೀಲಂಕಾ ಮೇಲಿನ ಪಂದ್ಯದಲ್ಲಿ.
ಅದೇ ವರ್ಷ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟರು.
ಟೆಸ್ಟ್ ಕ್ರಿಕೆಟ್ ನಲ್ಲಿ ಇವರು ಪಡೆದ ಮೊದಲ ವಿಕೆಟ್ ಇಂಗ್ಲೆಂಡ್ ನ ಅಲನ್ ಲ್ಯಾಂಬ್.
ಟೆಸ್ಟ್ ಕ್ರಿಕೆಟ್ ನಲ್ಲಿ ಇವರು ಪಡೆದ ಕೊನೆಯ ವಿಕೆಟ್ ಆಸ್ಟ್ರೇಲಿಯಾದ ಮಿಚೆಲ್ಲ್ ಜಾನ್ಸನ್.
೬೦೦ ವಿಕೆಟ್ಗಳನ್ನು ಪಡೆದವರಲ್ಲಿ ಕುಂಬ್ಳೆ ಮೂರನೆಯವರು.
೧೩೨ ಟೆಸ್ಟ್ ಪಂದ್ಯಗಳನ್ನು ಆಡಿ ೬೧೯ ವಿಕೆಟ್ಗಳನ್ನು ಪಡೆದಿದ್ದಾರೆ.
೨೭೧ ಏಕ ದಿನ ಪಂದ್ಯಗಳಲ್ಲಿ ೩೩೭ ವಿಕೆಟ್ಗಳನ್ನು ಪಡೆದಿದ್ದಾರೆ.
ದಿಲ್ಲಿಯ ಫಿರೋಜ್ ಷಾ ಕೋಟ್ಲಾ ದಲ್ಲಿ ಪಾಕಿಸ್ತಾನದ ವಿರುದ್ಧ ೧೦/೭೪ ಅವರ ಟೆಸ್ಟ್ ಜೀವನದ ಶ್ರೇಷ್ಟ ಬೌಲಿಂಗ್ ಪ್ರದರ್ಶನ.
ವೆಸ್ಟ್ ಇಂಡೀಸ್ ವಿರುದ್ಧ ೬/೧೨ ಅವರ ಏಕದಿನದ ಶ್ರೇಷ್ಟ ಬೌಲಿಂಗ್ ಪ್ರದರ್ಶನ.
ಚಿತ್ರಪುಟ: ಅಂತರ್ಜಾಲದಿಂದ ಡೌನ್ ಲೋಡ್ ಮಾಡಿದ್ದು.